ಪುಣೆ: ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ ವಿದ್ಯಾರ್ಥಿಗಳ ಆರೋಗ್ಯ ಸುಧಾರಿಸಿದೆ.
ಪುಣೆಯ ಖೇಡ್ ತಾಲೂಕಿನ ಕೋಚಿಂಗ್ ಸೆಂಟರ್ ನಲ್ಲಿ ಜೆಇಇ, ನೀಟ್ ಪರೀಕ್ಷಾರ್ತಿಗಳಿಗಾಗಿ ಕೋಚಿಂಗ್ ನೀಡಲಾಗುತ್ತಿತ್ತು. 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ. ಕಳೆದ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬಳಿಕ ವಾಂತಿ-ಭೇದಿ, ಅತಿಸಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…