ಥಾಣೆ: 6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
42 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಥಾಣೆಯ ಹಿಲ್ ಲೇನ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿಯ ನೆರೆ ಮನೆಯಲ್ಲಿಯೇ ವಾಸವಿದ್ದ ಆರೋಪಿಯು ಆಟವಾಡುವ ನೆಪದಲ್ಲಿ ತನ್ನ ಮನೆಗೆ ಆಗಾಗ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ. ಕೆಲ ದಿನಗಳ ಹಿಂದೆ ಬಾಲಕಿಯ ಹಿರಿಯ ಸೋದರನಿಗೆ ಆರೋಪಿ ಕುಕೃತ್ಯವೆಸಗಿರುವುದು ಕಂಡು ಪೋಷಕರಿಗೆ ತಿಳಿಸಿದ್ದಾನೆ. ಅವರು ಪೊಲೀಸರನ್ನು ಸಂಪರ್ಕಿಸಿ ವ್ಯಕ್ತಿ ವಿರುದ್ಧ ದೂರು ಸಲ್ಲಿಸಿದ್ದರು.
ಬಾಲಕಿ ಮೇಲೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದ್ದು ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ಐಪಿಸಿ ಸೆಕ್ಷನ್ 376ರಡಿ ಮತ್ತು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.