ಅಗ್ನಿಪಥ ಯೋಜನೆ: ಭಾರತೀಯ ಸೇನೆ ಸೇರುವುದನ್ನು ಕಡ್ಡಾಯಗೊಳಿಸಿಲ್ಲ- ಸಚಿವ ವಿ.ಕೆ. ಸಿಂಗ್

ನಾಗ್ಪುರ: ‘ಅಗ್ನಿಪಥ’ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಕೇಂದ್ರ ಸಚಿವ ವಿ.ಕೆ. ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಅಗ್ನಿಪಥ’ ಯೋಜನೆ  ಇಷ್ಟವಿಲ್ಲದಿದ್ದರೆ ಸಶಸ್ತ್ರ ಪಡೆಗಳಿಗೆ ಸೇರಬೇಡಿ ಎಂದು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ವರದಿಗಾರರ ಬಳಿ ಮಾತನಾಡಿದ ಅವರು, ‘ಭಾರತೀಯ ಸೇನೆ ಸೇರುವುದನ್ನು ಕಡ್ಡಾಯಗೊಳಿಸಿಲ್ಲ. ಸ್ವ ಇಚ್ಛೆಯಿಂದ ಸೇರಬಹುದು’ ಎಂದು ಹೇಳಿದ್ದಾರೆ.

‘ಸೇನೆ ಸೇರುವುದು ಸ್ವಯಂಪ್ರೇರಿತ. ಕಡ್ಡಾಯವಲ್ಲ. ಯಾರಾದರೂ ಆಕಾಂಕ್ಷಿಗಳು ಸೇರಬೇಕೆಂದು ಬಯಸಿದಲ್ಲಿ ಸ್ವ ಇಚ್ಛೆಯಿಂದ ಸೇರಬಹುದು. ನಾವು ಕಡ್ಡಾಯ ಮಾಡುವುದಿಲ್ಲ. ನೀವು ‘ಅಗ್ನಿಪಥ’ ಯೋಜನೆಯನ್ನು ಇಷ್ಟಪಡದಿದ್ದರೆ ಸಶಸ್ತ್ರ ಪಡೆಗಳನ್ನು ಸೇರಬೇಡಿ. ಸೇನೆ ಸೇರಿ ಎಂದು ನಿಮ್ಮನ್ನು ಹೇಳಿದವರು ಯಾರು? ನೀವು ಬಸ್ ಮತ್ತು ರೈಲುಗಳಿಗೆ ಬೆಂಕಿ ಹಚ್ಚುತ್ತಿದ್ದೀರಿ. ನಿಮ್ಮನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತದೆ ಎಂದು ಹೇಳಿದವರಾರು? ಅರ್ಹತಾ ಮಾನದಂಡಗಳನ್ನು ಪೂರೈಸಿದರೆ ಮಾತ್ರ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ್ದಾರೆ.

 

Gayathri SG

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

4 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

8 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

38 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

45 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

57 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago