ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಫೆ.12) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕ ಪಕ್ಷದ ಬಗ್ಗೆ ಅತೃಪ್ತರಾಗಿದ್ದರು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮುಂದಿನ ದಿನಗಳಲ್ಲಿ ಚವಾಣ್ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಬಹುದು ಎನ್ನಲಾಗ್ತಿದೆ.