ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆಈ ನಡುವೆ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯು ( ತಾಜ್ಮಹಲ್ಗಿಂತಲೂ ಸುಂದರವಾಗಿರಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಯೋಧ್ಯೆ ಮಸೀದಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಜಿ ಅರ್ಫಾತ್ ಶೇಖ್ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯ ಶಿಲಾನ್ಯಾಸ ಮುಂದಿನ ವರ್ಷ ನಡೆಯಲಿದೆ. ಈ ಸಮಾರಂಭಕ್ಕೆ ಸಂತರು, ಪೀರರು ಮತ್ತು ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಶೇಖ್ ಮಾಹಿತಿ ನೀಡಿದ್ದಾರೆ.
ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಈ ಮಸೀದಿಯ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಮಸೀದಿ ಸಿದ್ಧವಾದಾಗ, ಮೆಕ್ಕಾ ಮಸೀದಿಯಲ್ಲಿ ನಮಾಜ್ನ ನೇತೃತ್ವ ವಹಿಸುವ ಇಮಾಮ್-ಎ-ಹರಾಮ್ ಸೇರಿದಂತೆ ಎಲ್ಲಾ ದೇಶಗಳ ಉನ್ನತ ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.
ಬಾಬ್ರಿ ಮಸೀದಿಯ ಬದಲಿಗೆ ಪ್ರವಾದಿಯ ಹೆಸರನ್ನು ಇಡಲಾಗಿದೆ. ಅಯೋಧ್ಯೆಯಿಂದ 25 ಕಿಮೀ ದೂರದಲ್ಲಿರುವ ಧನ್ನಿಪುರದ ಬೇರೆ ಸ್ಥಳದಲ್ಲಿ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿ ನಿರ್ಮಿಸಲಾಗುತ್ತಿದೆ. ಅಯೋಧ್ಯೆ ರಾಮಮಂದಿರ ವಿವಾದದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಮಸೀದಿ ನಿರ್ಮಾಣಕ್ಕೆ ಮತ್ತೊಂದು ಜಾಗವನ್ನು ರಾಜ್ಯ ಸರ್ಕಾರ ನೀಡಿದೆ ಎಂದು ತಿಳಿಸಿದ್ದಾರೆ.