ಪುಣೆ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಪುಣೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪಕ್ಷದ ಮುಖಂಡರು ಬುಧವಾರ ತಿಳಿಸಿದ್ದಾರೆ.
ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಅವರು ನಿಧನರಾದರು.
ಬಿಜೆಪಿಯ ಉನ್ನತ ರಾಜ್ಯ ಮತ್ತು ಕೇಂದ್ರ ನಾಯಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಇತರರು ಬಾಪಟ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಪುಣೆಯ ಕಸ್ಬಾ ಪೆತ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಅವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸುಮಾರು 19 ತಿಂಗಳು ಜೈಲಿನಲ್ಲಿದ್ದರು ಮತ್ತು 2019 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು.
ಕೆಲವು ಸಮಯದಿಂದ ಬಿಜೆಪಿ ಹಿರಿಯ ನಾಯಕ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.