ಮಹಾರಾಷ್ಟ್ರ: ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿರುವ, ಮುಖ್ಯಮಂತ್ರಿ ಏಕನಾಥ ಶಿಂಧೆ

ಮಹಾರಾಷ್ಟ್ರ: ಮುಖ್ಯಮಂತ್ರಿ ಏಕನಾಥ ಶಿಂಧೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, 15 ಶಾಸಕರಿಗೆ ಸಚಿವರಾಗುವ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮುಂದಿನ ವಾರ ತಮ್ಮ ಸಂಪುಟ ವಿಸ್ತರಣೆ ಮಾಡಲಿದ್ದು, ಕನಿಷ್ಠ 15 ಜನ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಒಬಿಸಿ ಮೀಸಲಾತಿ ವಿಚಾರದಿಂದ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬಗೊಂಡಿದ್ದು, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದೆ. ಸುಪ್ರೀಂ ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕ ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಸೇನೆ ಪಕ್ಷದಲ್ಲಿ ಬಿರುಕುಂಟಾದ ಬಳಿಕ ಉದ್ಧವ್ ಠಾಕ್ರೆ ಜೂನ್ ತಿಂಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ, ಜೂನ್ 30 ರಂದು ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಾಗೂ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Sneha Gowda

Recent Posts

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

6 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

10 hours ago