News Karnataka Kannada
Tuesday, April 30 2024
ಮಹಾರಾಷ್ಟ್ರ

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐದು ಮಂದಿ ಮೃತ್ಯು

ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಮಹಾರಾಷ್ಟ್ರ: ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.

ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದ ಓರ್ವನನ್ನು ಪೊಲೀಸರ ತಂಡ ರಕ್ಷಿಸಿದೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್, ಒಬ್ಬರ ನಂತರ ಒಬ್ಬರಂತೆ ಪಾಳು ಬಾವಿಗೆ ಹಾರಿದ್ದಾರೆ, ಆರು ಜನರ ಪೈಕಿ ಐವರ ಮೃತ ದೇಹಗಳನ್ನು ರಕ್ಷಣಾ ತಂಡವು ಹೊರತೆಗೆದಿದೆ ಎಂದು ಹೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು