News Karnataka Kannada
Wednesday, May 01 2024
ಮಹಾರಾಷ್ಟ್ರ

ಮಹಾರಾಷ್ಟ್ರದ  ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ  ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ತಮ್ಮ  87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.
Photo Credit : News Kannada

ನವದೆಹಲಿ: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ  ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ತಮ್ಮ  87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಫೆ.23) ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್ ಜೋಶಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ಪಶ್ಚಿಮದ ಮಾಟುಂಗಾ ರೂಪರೆಲ್ ಕಾಲೇಜು ಬಳಿಯ ಡಬ್ಲ್ಯು 54 ರಲ್ಲಿ ನಿವಾಸದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಶವಯಾತ್ರೆ ಆರಂಭವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು