ಮಹಾರಾಷ್ಟ್ರ: ಮಹಾರಾಷ್ಟ್ರ ದ ಮಾಜಿ ಸಚಿವ ಬಾಬಾ ಸಿದ್ದಿಕಿ 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
ಬಾಬಾ ಸಿದ್ದಿಕಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ, ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಮತ್ತು ಇದು 48 ವರ್ಷಗಳ ಸುದೀರ್ಘ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಬಾಬಾ ಜಿಯಾವುದ್ದೀನ್ ಸಿದ್ದಿಕಿ ಇಫ್ತಾರ್ ಪಾರ್ಟಿಗಳಿಗೆ ಪ್ರಸಿದ್ಧಿ ಬಾಬಾ ಜಿಯಾವುದ್ದೀನ್ ಸಿದ್ದಿಕಿ ವರ್ಷಕ್ಕೊಮ್ಮೆ ಇಫ್ತಾರ್ ಕೂಟವನ್ನು ಆಯೋಜಿಸುತ್ತಿದ್ದರು.
ವಿಶೇಷವಾಗಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖರು ಭಾಗವಹಿಸುವ ಈ ಇಫ್ತಾರ್ ಕೂಟಗಳಿಂದಲೇ ಬಾಬಾ ಸಿದ್ದಿಕಿ ಪ್ರಸಿದ್ಧಿ ಪಡೆದಿದ್ದಾರೆ.