ಪಾಲ್ಘರ್, ಜ.31: ಬಸ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಗುಜರಾತ್ ನೋಂದಾಯಿತ ಕಾರಿನ ಚಾಲಕ ಚಾರೋಟಿ ಪ್ರದೇಶದ ಬಳಿ ವಾಹನದ ನಿಯಂತ್ರಣವನ್ನು ಕಳೆದುಕೊಂಡು ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ವರದಿಯಾಗಿದೆ.
ಮುಂಬೈನಿಂದ ಉತ್ತರಕ್ಕೆ 140 ಕಿ.ಮೀ ದೂರದಲ್ಲಿರುವ ದಹನು ಬಳಿ ಮುಂಜಾನೆ 3.30 ಕ್ಕೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದಾಗ, ಚಾಲಕ ಮತ್ತು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಗುರುತು, ಮೂಲದ ಸ್ಥಳ ಮತ್ತು ಇತರ ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ ಮತ್ತು ಭೀಕರ ಅಪಘಾತದ ಕಾರಣಗಳ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.