ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗಸ್ಟ್​ 15 ರಿಂದ ರೋಗಿಗಳಿಗೆ ಉಚಿತ ಚಿಕಿತ್ಸೆ

ಮಹಾರಾಷ್ಟ್ರ: ಆಗಸ್ಟ್ 15 ರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸುವುದಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿದ್ದು, ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದರು.

ಆರೋಗ್ಯದ ಹಕ್ಕು (ಆರ್ಟಿಕಲ್ 21) ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮೀಣ ಆಸ್ಪತ್ರೆಗಳು, ಮಹಿಳಾ ಆಸ್ಪತ್ರೆಗಳು, ಜಿಲ್ಲಾ ಜನರಲ್ ಆಸ್ಪತ್ರೆಗಳು, ಉಪ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯು ಉಚಿತವಾಗಿರುತ್ತದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಟ್ಟು 2418 ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಆದರೆ ಈ ಯೋಜನೆಯು ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಆಸ್ಪತ್ರೆಗಳು ಅಥವಾ ವೈದ್ಯಕೀಯ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

24 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

50 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago