ಮಹಾರಾಷ್ಟ್ರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಕಾಶೀಮಠಾಧೀಶರ ಭೇಟಿ

ಮಹಾರಾಷ್ಟ್ರ: ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಬುಧವಾರ ಭೇಟಿ ನೀಡಿದರು.

ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಬೆಂಗಳೂರಿನ ಕಾಶೀಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಆರ್ಶೀವಾದ ಪಡೆದು ನಾಗಪುರದಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಲು ಭಿನ್ನವಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಶೀಮಠಾಧೀಶರೊಂದಿಗೆ ಸಂಸ್ಕೃತ ಭಾರತಿಯ ಪ್ರಮುಖರಾದ ದಿನೇಶ್ ಕಾಮತ್, ವಿಶ್ವನಾಥ ಭಟ್, ರಾಧಾಕೃಷ್ಣ ಭಟ್, ಅಮಿತ್ ದಿನೇಶ್ ಪೈ ಮುಂಬೈ, ಮೋಹನದಾಸ್ ಮಲ್ಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

Ashika S

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

10 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

22 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

55 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago