ಆನ್‌ಲೈನ್‌ ಜೂಜಾಟದಲ್ಲಿ 5 ಕೋಟಿ ಗೆದ್ದ ಸಂಭ್ರಮದಲ್ಲಿದ್ದ ಉದ್ಯಮಿಗೆ ಶಾಕ್‌

ಮಹಾರಾಷ್ಟ್ರ: ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಮೊದಲು 5 ಕೋಟಿ ರೂ. ಬಂದಿತ್ತು, ಹೆಚ್ಚು ಹಣ ಗಳಿಸಬಹುದೆನ್ನುವ ಆಸೆಯಲ್ಲಿ ಜೂಜಾಡಿ 58 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು 14 ಕೋಟಿ ರೂ. ನಗದು, 4 ಕೆಜಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಉದ್ಯಮಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದ್ದು, ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸುವ ಮುನ್ನವೇ ಪರಾರಿಯಾಗಿದ್ದಾರೆ. ದುಬೈಗೆ ತೆರಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಉದ್ಯಮಿ ಹಲವು ಉದ್ಯಮಿಗಳಿಗೆ ಆನ್​ಲೈನ್ ಜೂಜಾಡುವಂತೆ ಪ್ರೇರೇಪಿಸುತ್ತಿದ್ದ ಬಳಿಕ ಕೋಟಿಗಟ್ಟಲೆ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.

ಹೆಚ್ಚು ಲಾಭ ಗಳಿಸಲು ಆನ್​ಲೈನ್​ನಲ್ಲಿ ಜೂಜಾಡುವಂತೆ ಉದ್ಯಮಿಯೊಬ್ಬರಿಗೆ ಜೈನ್ ಮನವರಿಕೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಖಾತೆಗೆ 8 ಲಕ್ಷ ಹಣ ಜಮಾ ಮಾಡಿ ಜೂಜು ಆರಂಭಿಸಿದ್ದರು. ಆರಂಭದಲ್ಲಿ 5 ಕೋಟಿ ರೂ ಗೆದ್ದಿದ್ದರು. ಬಳಿಕ 58 ಕೋಟಿ ರೂ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ.

ಉದ್ಯಮಿ ನಷ್ಟದ ಬಗ್ಗೆ ಅನುಮಾನಗೊಂಡು ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದನು, ಆದರೆ ಆರೋಪಿಯು ಹಣವನ್ನು ಹಿಂದಿರುಗಿಸಲು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು. ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಾಗಿದೆ.  ಗೊಂಡಿಯಾದಲ್ಲಿರುವ ಜೈನ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಕಾರ್ಯಾಚರಣೆಯಲ್ಲಿ 14 ಕೋಟಿ ರೂಪಾಯಿ ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿವೆ.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago