News Karnataka Kannada
Monday, May 20 2024
ಮಹಾರಾಷ್ಟ್ರ

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

Sj=havrma
Photo Credit : NewsKarnataka

ಮಹಾರಾಷ್ಟ್ರ: ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ಸಾವನ್ನಪ್ಪಿದ್ದಾನೆ. ಪ್ರಾರ್ಥಮೇಶ್ ಮೃತ ದುರ್ದೈವಿ.

ಚಿಕನ್​​ ಶವರ್ಮಾ ಸೇವಿಸಿದ ಮರುದಿನ ಯುವಕನಿಗೆ ತೀವ್ರ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ಸಹ ತೀವ್ರ ಅಸ್ವಸ್ಥರಾಗಿದ್ದಾರೆ.

ಹಾಳಾದ ಕೋಳಿಯನ್ನು ಶವರ್ಮಾದಲ್ಲಿ ಬಳಸಿದಕ್ಕಾಗಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧ ಮಹಾರಾಷ್ಟ್ರ ಪೊಲೀಸರು ಶವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರ ವಿರುದ್ಧ ಕೇಸ್​​ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು