ಮುಂಬೈ: ಮೊದಲನೇ ಮದುವೆ ಮುರಿದ ಬಿದ್ದು, ಎರಡನೇ ಮದುವೆಯಾದ ಕಾರಣ ತನ್ನ ಪತಿ ತನ್ನನ್ನು ದೈಹಿಕವಾಗಿ ಬಳಸಿ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದಿದ್ದಾನೆ ಎಂದು ಮಹಿಳೆಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಕೌಟುಂಬಿಕ ಜಗಳದಿಂದ ಪತ್ನಿ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ. ಮಹಿಳೆ ನೀಡಿದ ದೂರಿನ ಆಧಾರ ಮೇಲೆ ಬಾಂಬೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ. ಸಂತ್ರಸ್ತೆ ಮಾಡಿದ ಆರೋಪಗಳನ್ನು ತಾಯಿ ಮತ್ತು ಚಿಕ್ಕಪ್ಪ ಸಮರ್ಥಿಸಿಕೊಂಡಿದ್ದಾರೆ. ಇದೀಗ ಆರೋಪಿ ಪತಿಗೆ 3 ಕೋಟಿ ರೂಪಾಯಿ ಪರಿಹಾರ ಮತ್ತು ತಿಂಗಳಿಗೆ 1.5 ಲಕ್ಷ ರೂಪಾಯಿ ಮಾಸಿಕ ಜೀವನಾಂಶ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.
ಕಳೆದ ವರ್ಷ ಜನವರಿಯಲ್ಲಿ ವಿಚಾರಣಾ ನ್ಯಾಯಾಲಯವು ಮಹಿಳೆಯು ಪತಿಯಿಂದ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಮತ್ತು ಆಕೆಗೆ ₹ 3 ಕೋಟಿ ಪರಿಹಾರ ನೀಡುವಂತೆ ಸೂಚಿಸಿತ್ತು.