ಮಹಾರಾಷ್ಟ್ರ: ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಗ್ರಾಮಸ್ಥರ ದಾಳಿಗೆ ಇಬ್ಬರು ಅರಣ್ಯ ಸಿಬ್ಬಂದಿಗಳು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮತ್ತು ಇಬ್ಬರು ಅರಣ್ಯ ಸಿಬ್ಬಂದಿಗಳು ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಂದ್ರಾದ ಪಯೋನಿ ತಹಸಿಲ್ನ ಖಟ್ಖೇಡಾ ಗ್ರಾಮದಲ್ಲಿ ಈಶ್ವರ್ ಮೋಟ್ಘರೆ (52) ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದ ಹುಲಿ. ವ್ಯಕ್ತಿಯನ್ನು ಕೊಂದು ಹಾಕಿತ್ತು.
ಘಟನೆ ಬಳಿಕ ಅರಣ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಹುಲಿ ಹಿಡಿಯಲು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.