ವರಂಧ ಘಾಟ್​ನಲ್ಲಿ 50 ಅಡಿ ಆಳದ ಕಮರಿಗೆ ಬಿದ್ದ ಮಿನಿ ಬಸ್

ಪುಣೆ: ನಗರದ ವರಂಧ ಘಾಟ್‌ನಲ್ಲಿ ಶನಿವಾರ ಮಧ್ಯರಾತ್ರಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಭೋರ್-ಮಹದ್ ಮಾರ್ಗದ ಘಾಟ್‌ನ ತಿರುವಿನಲ್ಲಿ ಖಾಸಗಿ ಮಿನಿ ಬಸ್ 50 ಅಡಿ ಆಳದ ಕಮರಿಗೆ ಬಿದ್ದಿದೆ.

ಇದರಿಂದ ರಾತ್ರಿ ಮಲಗಿದ್ದ ಪ್ರಯಾಣಿಕರು ಒಮ್ಮೆಲೆ ತತ್ತರಿಸಿದರು. ಕೆಳಗೆ ನೀರಾ ದೇವಧರ್ ಅಣೆಕಟ್ಟು ಇತ್ತು. ಬಸ್ ಅಣೆಕಟ್ಟೆಗೆ ಬೀಳುವ ಮುನ್ನವೇ ಮರ, ಪೊದೆಗಳಲ್ಲಿ ಸಿಲುಕಿಕೊಂಡಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬಸ್ಸಿನಲ್ಲಿದ್ದ 10 ಮಂದಿ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ನಾಗರಿಕರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್‌ ಸಿಕ್ಕಿಹಾಕಿಕೊಂಡವರನ್ನು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾಪಾಡಿದ್ದಾರೆ. ಈ ಘಟನೆಯಲ್ಲಿ ಚಾಲಕ ಅಜಿಂಕ್ಯ ಸಂಜಯ್ ಕೋಲ್ಟೆ ಮೃತಪಟ್ಟಿದ್ದಾರೆ. ಭೋರ್ ಉಪಜಿಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ashika S

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

8 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

23 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

47 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

59 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago