ಇಸ್ಲಾಮಿಕ್ ಧರ್ಮ ಪ್ರಚಾರಕ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

ಮುಂಬೈ: ದ್ವೇಷ ಭಾಷಣ ಹಿನ್ನಲೆ ಗುಜರಾತ್ ಪೊಲೀಸರು ಇಸ್ಲಾಮಿಕ್ ಧರ್ಮ ಪ್ರಚಾರಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

ಜನವರಿ 31ರ ರಾತ್ರಿ ಜುನಾಗಢದ ‘ಬಿ’ ಡಿವಿಷನ್ ಪೊಲೀಸ್ ಠಾಣೆ ಬಳಿಯ ತೆರೆದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಫ್ತಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು.

ಮಾಡಿದ ಉದ್ರೇಕಕಾರಿ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಜುನಾಗಢ್ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಫ್ತಿ ಸಲ್ಮಾನ್ ಪ್ರಸ್ತುತ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿದ್ದು, ಮುಫ್ತಿ ಅವರ ನೂರಾರು ಬೆಂಬಲಿಗರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ವಿಡಿಯೊ ವೈರಲ್ ಆದ ನಂತರ, ಅಝ್ಹರಿ ಮತ್ತು ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ಒಡೆದಾರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಅಝ್ಹರಿ ಬಂಧನಕ್ಕೊಳಗಾಗಿದ್ದು ಇದೇ ಮೊದಲೇನೂ ಅಲ್ಲ. 2018 ರಲ್ಲಿ ಕರ್ನಾಟಕದಲ್ಲಿ ಭಾಷಣ ಮಾಡುವಾಗ ಹಿಂದೂಗಳ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳಿಗಾಗಿ ಅವರನ್ನು ಬಂಧಿಸಲಾಯಿತು. ವರದಿಗಳ ಪ್ರಕಾರ, ಕೆಲವು ದಿನಗಳ ನಂತರ ಅಝಾರಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಆದಾಗ್ಯೂ, ಅವರ ವಿರುದ್ಧದ ಆರೋಪಗಳು ಇನ್ನೂ ಬಾಕಿ ಉಳಿದಿವೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

19 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

42 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

59 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago