News Karnataka Kannada
Monday, April 29 2024
ಮಹಾರಾಷ್ಟ್ರ

ಅತ್ಯಾಚಾರ ಆರೋಪ ನಿರಾಕರಿಸಿದ ಬಹುಕೋಟಿ ಉದ್ಯಮಿ ಜಿಂದಾಲ್‌

Multi-crore businessman Jindal denies rape allegations
Photo Credit : News Kannada

ಮುಂಬೈ: ದೇಶದ ಅತಿದೊಡ್ಡ ಉದ್ಯಮ ಸಮೂಹದ ಅಧ್ಯಕ್ಷರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಜೆಎಸ್‌ಡಬ್ಲ್ಯೂ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ತಮ್ಮ ಮೇಲಿನ ಅತ್ಯಾಚಾರದ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಅವರು ನೀಡಿರುವ ಹೇಳಿಕೆಯಲ್ಲಿ ತಮ್ಮ ಮೇಲಿನ ಆರೋಗಳು “ಸುಳ್ಳು ಮತ್ತು ಆಧಾರರಹಿತ” ಎಂದು ಕೋಟ್ಯಧಿಪತಿ ಉದ್ಯಮಿ ಕರೆದಿದ್ದಾರೆ. ತನಿಖೆಯ ಉದ್ದಕ್ಕೂ ಸಂಪೂರ್ಣ ಸಹಕಾರವನ್ನು ಒದಗಿಸಲು ತಾನು ಬದ್ಧನಾಗಿದ್ದೇನೆ ಎಂದು ಹೇಳಿದರು. ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಂಬೈ ಪೊಲೀಸ್ ಇಲಾಖೆಯು ಜಿಂದಾಲ್ ವಿರುದ್ಧ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದೆ. 2022ರ ಜನವರಿ 24ರಂದು ಜಿಂದಾಲ್‌ನ ಬಿಕೆಸಿ ಆವರಣದಲ್ಲಿರುವ ಪೆಂಟ್‌ಹೌಸ್‌ನಲ್ಲಿ ಅತ್ಯಾಚಾರ ಘಟನೆ ನಡೆದಿದೆ ಎಂದು ಆರೋಪಿಸಿ 30 ವರ್ಷದ ಮುಂಬೈ ಮೂಲದ ನಟಿಯೊಬ್ಬರು ದೂರು ದಾಖಲಿಸಿದ್ದಾರೆ.

ಸಜ್ಜನ್‌ ಜಿಂದಾಲ್‌ ಮೇಲೆ IPC 376 (ಅತ್ಯಾಚಾರ), IPC 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಮೇಲೆ ಬಲಾತ್ಕಾರ ಮಾಡುವ ಉದ್ದೇಶ), ಮತ್ತು IPC 503 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು