News Karnataka Kannada
Friday, May 03 2024
ಮಹಾರಾಷ್ಟ್ರ

ಮುಂಬೈ: ಬರೋಬ್ಬರಿ 2,500 ಕೆ.ಜಿ.ಗೂ ಅಧಿಕ ಪ್ರಮಾಣದ ಗೋಮಾಂಸ ವಶ

Industrialist's suicide case: Main accused arrested
Photo Credit : Twitter

ಮುಂಬೈ: ಉಪನಗರ ಡಿಯೋನಾರ್‌ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 2,500 ಕೆ.ಜಿ.ಗೂ ಅಧಿಕ ಪ್ರಮಾಣದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.

ಪ್ರಾಣಿ ದಯಾ ಸಂಘಟನೆ ನೀಡಿದ ಸುಳಿವಿನ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಮಾಲೆಗಾಂವ್ ನಿಂದ‌ ಈ ಮಾಂಸವನ್ನು ಶಫೀಕ್ ತಾಡಾ ಎಂಬಾತನ ನೆರವಿನಿಂದ ತರಲಾಗಿದೆ, ಸಾಜಿದ್ ಖುರೇಷಿ ಎಂಬ ವ್ಯಕ್ತಿಗೆ ತಲುಪಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡ ಗೋಮಾಂಸದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು