News Karnataka Kannada
Saturday, May 04 2024
ಮಹಾರಾಷ್ಟ್ರ

ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವು: 80 ಮಂದಿ ಅಸ್ವಸ್ಥ

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.
Photo Credit : Pixabay

ಮಹಾರಾಷ್ಟ್ರ: ಮಹಾರಾಷ್ಟ್ರದ ಚಂದ್ರಾಪುರದಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿ, 80 ಮಂದಿ ಅಸ್ವಸ್ಥಗೊಂಡಿರುವ ಘಟನೆ  ನಡೆದಿದೆ.

ಮೃತ ವ್ಯಕ್ತಿಯನ್ನು ಗುರುಫೆನ್ ಯಾದವ್ ಎಂದು ಗುರುತಿಸಲಾಗಿದ್ದು ಅವರಿಗೆ ಇತರೆ ಆರೋಗ್ಯ ಸಮಸ್ಯೆಗಳಿದ್ದವು ಎಂದು ವೈದ್ಯರು ಹೇಳಿದ್ದಾರೆ.

ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಲೆ 400ಕ್ಕೂ ಅಧಿಕ ಮಂದಿ ಪ್ರಸಾದ ಸೇವಿಸಿದ್ದರು.

ಅದರಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ 80 ಮಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ,  ಚಿಂತಾಜನಕ ಸ್ಥಿತಿಯಲ್ಲಿರುವ ಆರು ಮಂದಿಯನ್ನು ಚಂದ್ರಾಪುರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. 24 ಮಂದಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ.

ಪ್ರಸಾದದಲ್ಲಿ ವಿಷಯಕಾರಿ ಅಂಶ ಏನಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು