ನಾಗ್ಪುರ: ಐಸ್ ತಯಾರಿಕೆಯ ಬಾಲಾಜಿ ಐಸ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಜೆ 5.30ರ ಸುಮಾರಿಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾದ ಘಟನೆ ಉಪ್ಪಲವಾಡಿ ಪ್ರದೇಶದಲ್ಲಿ ಸಂಭವಿಸಿದೆ.
ಅಮೋನಿಯಾ ಗ್ಯಾಸ್ ಟ್ಯಾಂಕ್ನಲ್ಲಿನ ಸೋರಿಕೆಯಿಂದ ಉಂಟಾದ ಸ್ಫೋಟವು ಹತ್ತಿರದ ಮನೆಗಳ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕೆಲವು ವಾಹನಗಳಿಗೂ ಹಾನಿಯಾಗಿದೆ.
ಉಸಿರುಗಟ್ಟುವಿಕೆ ಮತ್ತು ಉಸಿರಾಟದ ತೊಂದರೆ ತಪ್ಪಿಸಲು ಹತ್ತಿರದಲ್ಲೇ ವಾಸಿಸುವ ಅನೇಕ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಪ್ರಾರಂಭಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.