ಪುಣೆ: ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ ಘಟನೆ ಪುಣೆ ಜಿಲ್ಲೆಯ ಅಹ್ಮದ್ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಧವಲ್ಪುರಿ ಫಾಟಾ ಬಳಿ ಮುಂಜಾನೆ 2.30ಕ್ಕೆ ಈ ಘಟನೆ ನಡೆದಿದೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ವೇಳೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.