News Karnataka Kannada
Saturday, April 27 2024
ಮಹಾರಾಷ್ಟ್ರ

ಸೀತೆಗೆ ‘ಸೀಗರೇಟ್‌’ ಸೇದಲು ಸಹಾಯ ಮಾಡಿದ ‘ರಾಮ’!

 ಮಹಾರಾಷ್ಟ್ರದ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿಗಳು ರಾಮಾಯಣ ಆಧಾರಿತ ನಾಟಕದಲ್ಲಿ ‘ಸೀತೆ’ ಪಾತ್ರಧಾರಿಯೂ ಧೂಮಪಾನ ಮಾಡುತ್ತಿರೋ ವಿಡಿಯೋ ಭಾರಿ ವಿವಾದ ಸೃಷ್ಟಿಸಿದೆ.
Photo Credit : News Kannada

ಪುಣೆ: ಮಹಾರಾಷ್ಟ್ರದ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿಗಳು ರಾಮಾಯಣ ಆಧಾರಿತ ನಾಟಕದಲ್ಲಿ ‘ಸೀತೆ’ ಪಾತ್ರಧಾರಿಯೂ ಧೂಮಪಾನ ಮಾಡುತ್ತಿರೋ ವಿಡಿಯೋ ಭಾರಿ ವಿವಾದ ಸೃಷ್ಟಿಸಿದೆ.

‘ರಾಮಲೀಲಾ’ ಆಧಾರಿತ ನಾಟಕದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಪುಣೆಯ ಸಾವಿತ್ರಿ ಬಾಯಿ ಫುಲೆ ವಿಶ್ವವಿದ್ಯಾಲಯದ ಓರ್ವ ಪ್ರೊಫೆಸರ್ ಮತ್ತು ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕ್ಷೇಪಾರ್ಹ ನಾಟಕವನ್ನು ಮಹಾರಾಷ್ಟ್ರದ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿಗಳು ಪ್ರದರ್ಶನ ನೀಡುತ್ತಿದ್ದರು. ಇದೇ ವೇಳೆ ಸೀತಾ ಮಾತೆಯ ಪಾತ್ರಧಾರಿ ಸಿಗರೇಟ್​ ಸೇದುತ್ತಿದ್ದ. ಇದರಿಂದ ಕುಪಿತಗೊಂಡ ಆರ್​ಎಸ್​ಎಸ್​ನ ವಿದ್ಯಾರ್ಥಿ ಘಟಕ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಎಬಿವಿಪಿ ಹಾಗೂ ಪುಣೆ ವಿಶ್ವವಿದ್ಯಾಲಯದ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು