ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ಮಹಾರಾಷ್ಟ್ರ : ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ ಬಸ್‌ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿತ್ತು ಈ ವೇಳೆ ಎದುರಿನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ.

ಇದೊಂದು ಭಯಾನಕ ಅಪಘಾತವಾಗಿದ್ದು ಬಸ್‌ನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆಯಲು ಬಸ್‌ನ್ನು ಅರ್ಧಕ್ಕೆ ಹೊಡೆಯಬೇಕಾಯ್ತು.ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಅಪಘಾತಕ್ಕೆ ಟೈರ್ ಸ್ಫೋಟವೇ ಕಾರಣ ಎನ್ನಲಾಗಿದೆ. ಇದರಿಂದ ಚಾಲಕನಿಗೆ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ. ಹಾಗೂ ಮೃತರ ಮನೆಗೆ ವಿಷಯ ತಿಳಿಸಲಾಗಿದೆ.

 

Nisarga K

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

6 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

16 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

29 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago