ನೌಕರಿ ಬಿಟ್ಟು ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿದ ಸಿಬ್ಬಂದಿ

ಪುಣೆ: ಹಲವು ಬಾರಿ ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ ಬಳಿಕ ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡಿ ತನಗೆ ತನೇ ಬೀಳ್ಕೊಡುಗೆ ಮಾಡಿಕೊಂಡು ಹೊರಟ ಘಟನೆ ಪುಣೆಯಲ್ಲಿ ನಡೆದಿದೆ.

ಅನಿಕೇತ್ ಎಂಬಾತ ಮೂರು ವರ್ಷಗಳಿಂದ ಈ ಕಂಪನಿಯಲ್ಲಿ ಸೇಲ್ಸ್​ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿದ್ದ. ವೇತನದಲ್ಲಿ ಹೆಚ್ಚಳವಿಲ್ಲದೆ ನಿರಾಸೆಗೊಂಡಿದ್ದ. ಕೊನೆಗೆ ಕೆಲಸ ಬಿಟ್ಟಿದ್ದ, ಕೆಲಸದ ಕೊನೆಯ ದಿನ ಸ್ನೇಹತರೊಂದಿಗೆ ಡೋಲು ಬಾರಿಸುತ್ತಾ, ಬಾಸ್​ ಎದುರು ನೃತ್ಯ ಮಾಡಿದ್ದಾರೆ., ಕೊನೆಗೆ ಬಾಸ್ ಅವರನ್ನು ಹೊರಹೋಗುವಂತೆ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮೂರು ವರ್ಷಗಳಲ್ಲಿ ಬಾಸ್​ ನಮ್ಮನ್ನು ಗೌರವಪೂರ್ವಕವಾಗಿ ನಡೆಸಿಕೊಂಡಿಲ್ಲ ಎಂದು ಅನಿಕೇತ್ ಹೇಳಿದ್ದಾರೆ. ಈ ವಿಡಿಯೋವನ್ನು ಇನ್​​ಸ್ಟಾಗ್ರಾಂನಲ್ಲಿ ಅನಿಕೇತ್​ನ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ಬಹಳಷ್ಟು ಮಂದಿ ತಮ್ಮ ಕಂಪನಿಯಲ್ಲಿ ಅನಿಕೇತ್​ ಅನುಭವಿಸಿದಂತಹ ಹಲವು ಸಮಸ್ಯೆಗಳನ್ನು ಅನುಭವಿಸಿರುತ್ತಾರೆ ಎಂದು ಹೇಳಿಕೊಂಡಿದ್ದಾರೆ.

https://www.instagram.com/p/C559bWNvEZa/?utm_source=ig_embed&utm_campaign=embed_video_watch_again

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago