ಸೋನಿ ವಿರುದ್ಧ ಎನ್​ಸಿಎಲ್​ಟಿ ಮೆಟ್ಟಿಲೇರಿದ ಝೀ

ಮುಂಬೈ: ವಿಲೀನ ಒಪ್ಪಂದದಿಂದ ಹೊರ ನಡೆದ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ಸಂಸ್ಥೆ ವಿರುದ್ಧ ಝೀ ಎಂಟರ್ಟೈನ್ಮೆಂಟ್ ಕೋರ್ಟ್ ಬಾಗಿಲು ತಟ್ಟಿದೆ.

ವರದಿ ಪ್ರಕಾರ, ಝೀ ಸಂಸ್ಥೆ ಮುಂಬೈ ಬೆಂಚ್​ನ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಬಳಿ ಸೋನಿ ವಿರುದ್ಧ ಅರ್ಜಿ ಹಾಕಿದ್ದು, ವಿಲೀನ ಒಪ್ಪಂದವನ್ನು ಜಾರಿಗೊಳಿಸಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದೆ. ವರದಿ ಪ್ರಕಾರ ಝೀ ಸಂಸ್ಥೆ ಸಿಂಗಾಪುರ್ ಇಂಟರ್ನ್ಯಾಷನಲ್ ಆರ್ಬಿಟ್ರೇಶನ್ ಕೋರ್ಟ್​ನ ಮೆಟ್ಟಿಲನ್ನೂ ಹತ್ತಿರುವುದು ತಿಳಿದು ಬಂದಿದೆ.

ಇನ್ನು ಅವ್ಯವಹಾರ ಪ್ರಕರಣವೊಂದರಲ್ಲಿ ಝೀ ಎಂಡಿ ಮತ್ತು ಸಿಇಒ ಪುನೀತ್ ಗೋಯಂಕಾ ಹೆಸರು ತಳಕುಹಾಕಿಕೊಂಡಿದ್ದು, ನ್ಯಾಯಾಲಯದಲ್ಲಿ ಇನ್ನೂ ಬಗೆಹರಿದಿಲ್ಲ. ಈ ಕಳಂಕ ಇರುವ ಪುನೀತ್ ಗೋಯಂಕಾ ಅವರು ವಿಲೀನಗೊಂಡ ಸಂಸ್ಥೆಯ ಸಿಇಒ ಆಗಬಾರದು ಎನ್ನುವುದು ಸೋನಿ ಪಿಕ್ಚರ್ಸ್ ಹಿಡಿದಿದ್ದ ಪಟ್ಟು. ಇದಕ್ಕೆ ಝೀ ಒಪ್ಪಿಲ್ಲ ಎನ್ನಲಾಗಿದೆ. ಈ ವಿಚಾರವಾಗಿಯೇ ಸೋನಿ ಸಂಸ್ಥೆ ಝೀ ಜೊತೆಗಿನ ಒಪ್ಪಂದವನ್ನು ರದ್ದು ಮಾಡಿರಬಹುದು ಎಂದು ಹೇಳಲಾಗಿದೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago