ಮಣಿಪುರ

ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ: ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ ನಟ ಕಿಶೋರ್

ಬೆಂಗಳೂರು: ಮನುಕುಲವೇ ತಲೆತಗ್ಗಿಸುವ ಹೇಯ ಕೃತ್ಯ ಮಣಿಪುರದಲ್ಲಿ ನಡೆದಿದೆ. ಇಬ್ಬರು ಯುವತಿಯರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ತಡವಾಗಿ ಬೆಳಕಿಗೆ ಬಂದ ಈ ಘಟನೆಯನ್ನು ಇಡೀ ರಾಷ್ಟ್ರವೇ ಖಂಡಿಸಿದೆ. ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರ, ರಾಜ್ಯ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ಸಹ ಈ ಅಮಾನುಷ ಕೃತ್ಯವನ್ನು ಕಟು ಶಬ್ದಗಳಲ್ಲಿ ನಿಂದಿಸುತ್ತಿದ್ದಾರೆ. ಬಹುಭಾಷಾ ನಟ, ಕನ್ನಡಿಗ ಕಿಶೋರ್ ಸಹ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ವಿಭಜನಾ ರಾಜಕೀಯ ಮಾಡುವ ರಾಜಕಾರಣಿಗಳು ಹಾಗೂ ಪ್ರಧಾನಿ ಮೋದಿ ಮೇಲೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘ಕೇವಲ ಮತ ​​ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ. ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ? ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ? ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ? ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ” ಎಂದು ಖಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕಿಶೋರ್ ಬರೆದುಕೊಂಡಿದ್ದಾರೆ.

Ashitha S

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

30 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

53 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago