ಮಣಿಪುರದ ಎಂಎಂಎ ಫೈಟರ್ ಚುಂಗ್ರೆಂಗ್ ಕೋರೆನ್ ಅವರ ವೀಡಿಯೊ ಕ್ಲಿಪ್ ಒಂದು ಭಾರೀ ಚರ್ಚೆ ಹುಟ್ಟಿಹಾಕಿದೆ. ಜಾತಿ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿ, ಶಾಂತಿ ನೆಲೆಸುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿಕೊಳ್ತಿರುವ ವಿಡಿಯೋ ಅದಾಗಿದೆ.
ವಿಡಿಯೋದಲ್ಲಿ ಚುಂಗ್ರೆಂಗ್ ಕೋರೆನ್ ಭಾವುಕರಾಗಿ ಕಾಣುತ್ತಿದ್ದಾರೆ. ಮ್ಯಾಟ್ರಿಕ್ಸ್ ಫೈಟ್ ನೈಟ್ ಪಂದ್ಯದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಇದು ನನ್ನ ವಿನಮ್ರ ವಿನಂತಿ. ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಸುಮಾರು ಒಂದು ವರ್ಷದಿಂದ ಗಲಾಟೆ ಆಗ್ತಿದೆ. ಜನ ಸಾಯುತ್ತಿದ್ದಾರೆ, ಅನೇಕರು ಪರಿಹಾರ ಶಿಬಿರಗಳಲ್ಲಿ ಇದ್ದಾರೆ.
ಈ ಪರಿಹಾರ ಶಿಬಿರಗಳಲ್ಲಿ ಆಹಾರ ಮತ್ತು ನೀರಿನ ಕೊರತೆ ಇದೆ. ಮಕ್ಕಳಿಗೆ ಸರಿಯಾಗಿ ಓದಲು ಸಾಧ್ಯವಾಗುತ್ತಿಲ್ಲ. ಅವರ ಭವಿಷ್ಯವು ಸ್ಪಷ್ಟವಾಗಿಲ್ಲ. ಮಾನ್ಯ ಮೋದಿ ಜೀ, ದಯವಿಟ್ಟು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಿ. ರಾಜ್ಯದಲ್ಲಿ ಶಾಂತಿ ನೆಲೆಸಲಿ ಎಂದು ಬೇಡಿಕೊಂಡಿದ್ದಾರೆ.
ಈ ವಿಡಿಯೋವನ್ನು ಕಾಂಗ್ರೆಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಪ್ರಧಾನಿ ಮೋದಿ ಅವರಿಗೆ ಮಣಿಪುರವೂ ಅವರ ಕುಟುಂಬದ ಭಾಗವಾಗಿದ್ದರೆ, ಇಂದು ಅಲ್ಲಿಯ ಜನರು ಅಳುವ ಸ್ಥಿತಿಗೆ ಬರುತ್ತಿರಲಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…