News Karnataka Kannada
Friday, May 03 2024
ಮಣಿಪುರ

ಮತದಾನದ ವೇಳೆ ಗುಂಡಿನ ದಾಳಿ: ಮೂವರು ಪೊಲೀಸರ ವಶಕ್ಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ.
Photo Credit : NewsKarnataka

ಇಂಫಾಲ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ.

ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭಯವನ್ನು ಉಂಟುಮಾಡಿದೆ. ಮತದಾನ ಪ್ರದೇಶದಲ್ಲಿ ಸುಮಾರು 10 ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಸಾವು ನೋವು ವರದಿಯಾಗಿಲ್ಲ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು