ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆರವಣಿಗೆಯ ವೀಡಿಯೋದಲ್ಲಿ ಆರೋಪಿ ಹಸಿರು ಟಿ ಶರ್ಟ್ ಧರಿಸಿದ್ದ. ಇದೇ ವೀಡಿಯೋ ಸಹಾಯದಿಂದ ತೌಬಲ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭತ್ತದ ಗದ್ದೆ ಕಡೆ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವುದು ಜಾಲತಾಣದಲ್ಲಿ ಬುಧವಾರ ಹರಿದಾಡಿತ್ತು. ಹರಿದಾಡಿದ್ದ ವೀಡಿಯೋ 2 ತಿಂಗಳ ಹಳೆಯದ್ದಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭಗೊಂಡ ಬಳಿಕ ಕಾಂಗ್ಫೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ನಡೆದಿದೆ. ಈ ಸಂಬಂಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇನ್ನು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ವಿಡಿಯೋವನ್ನು ಹಂಚಿಕೊಳ್ಳದಂತೆ ಟ್ವಿಟರ್ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಟ್ವೀಟರ್ ಸೇರಿ ವಿವಿಧ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚಿಸಿದೆ. ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಸಿಜೆ, ಈ ಸಂಬಂಧ ವರದಿ ನೀಡುವಂತೆ ಕೇಂದ್ರ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಸೂಚನೆ ಕೊಟ್ಟಿದ್ದಾರೆ.
*All out effort to arrest culprits as regard to the viral video of 02 (two) women paraded naked :*
As regard to the viral video of 02 (two) women paraded naked by unknown armed miscreants on 4th May, 2023, a case of abduction, gangrape and murder etc
1/2
— Manipur Police (@manipur_police) July 19, 2023