ಇಂಫಾಲ: ಮಣಿಪುರದ ಕಾಂಗ್ಪೋಕಿ ಜಿಲ್ಲೆಯಲ್ಲಿ ಮಂಗಳವಾರ ಕನಿಷ್ಠ ಮೂವರು ಬುಡಕಟ್ಟು ಜನರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲ್ ಪಶ್ಚಿಮ ಮತ್ತು ಕಾಂಗ್ಪೋಕಿ ಜಿಲ್ಲೆಗಳ ಗಡಿ ಪ್ರದೇಶಗಳ ಉದ್ದಕ್ಕೂ ಇರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಹಳ್ಳಿಗಳ ಮೇಲೆ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿ ಮೂವರು ಗ್ರಾಮಸ್ಥರನ್ನು ಕೊಂದಿದ್ದಾರೆ. ಬಂಡುಕೋರರು ವಾಹನದಲ್ಲಿ ಬುಡಕಟ್ಟು ಸಮುದಾಯದ ಹಳ್ಳಿಗಳಿಗೆ ವಾಹನದಲ್ಲಿ ಆಗಮಿಸಿ ಈ ಕೃತ್ಯ ನಡೆಸಿದ್ದಾರೆ.
ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸುವ ಮೊದಲೇ ಸ್ಥಳದಿಂದ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 8 ಮತ್ತು 9 ರಂದು, ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್ನಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದರು.