ಇಂಫಾಲ್: ಮಣಿಪುರದಲ್ಲಿ ಮೇ4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಜುಲೈ 19 ರಂದು ಘಟನೆಯ ವೀಡಿಯೊ ವೈರಲ್ ಆದ ನಂತರ ಮಣಿಪುರ ಪೊಲೀಸರು ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲು ನಿರ್ಧರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 3 ರಂದು ಬಿಷ್ಣುಪುರದಲ್ಲಿ ಶಸ್ತ್ರಾಗಾರದ ಲೂಟಿಗೆ ಕಾರಣವಾದ ಘಟನೆಗಳನ್ನು ತನಿಖೆ ಮಾಡಲು ರಾಜ್ಯ ಪೊಲೀಸರು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಿದ್ದಾರೆ ಎಂದು ಅವರು ಹೇಳಿದರು. ಈ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯೊಬ್ಬರು ವಿಚಾರಣೆಯ ನೇತೃತ್ವ ವಹಿಸಿದ್ದು, ಆರು ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.