News Karnataka Kannada
Friday, April 19 2024
Cricket
ಮಣಿಪುರ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಹಿಳೆಯ ಹತ್ಯೆ

manipur-violence
Photo Credit : News Kannada

ಇಂಫಾಲ: ಮಣಿಪುರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಪೂರ್ವ ಇಂಫಾಲ್​​ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು