Categories: ಮಣಿಪುರ

ಮ್ಯಾನ್ಮಾರ್‌- ಭಾರತ ಗಡಿಯಲ್ಲಿ ಬೇಲಿ ಹಾಕಲು ನಿರ್ಧಾರ

ಇಂಫಾಲ್‌: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿರುವ ನಡುವೆಯೇ, ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ನಿಯೋಜಿಸಲಾಗಿರುವ ಸೇನೆಗೆ ಪರಮಾಧಿಕಾರ ನೀಡುವ ಆಫ್ಗ್ಪಾ(ಸಶಸ್ತ್ರ ಪಡೆಗಳ ವಿಶೇಷಾಧಿಕಾರ) ಕಾಯ್ದೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಿ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ.

ಈ ಕಾಯ್ದೆ ಅಡಿಯಲ್ಲಿ 19 ಪೊಲೀಸ್‌ ಠಾಣೆಯನ್ನು ಹೊರತುಪಡಿಸಿ ರಾಜ್ಯದ ಮಿಕ್ಕೆಲ್ಲ ಪೊಲೀಸ್‌ ಠಾಣೆಗಳು ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆ ಅಡಿಗೆ ಒಳಪಡುತ್ತದೆ. ಮುಂಬರುವ ಅ.1ರಿಂದ ಜಾರಿಯಾಗುವಂತೆ 6 ತಿಂಗಳು ಕಾಯ್ದೆ ವಿಸ್ತರಣೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಿಬ್ಬರ ಮೃತದೇಹ ಫೋಟೋ ವೈರಲ್‌ ಆದ ಬಳಿಕ ರಾಜ್ಯ ಮತ್ತೆ ಉದ್ವಿಗ್ನಗೊಂಡಿದೆ.

ಕಳೆದ 5 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿದ್ದ ಮಣಿಪುರದಲ್ಲಿ, ಮೇ 3ರಂದು ಸ್ಥಗಿತಗೊಳಿಸಲಾಗಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಇದೇ ಶನಿವಾರ ಸೆಪ್ಟೆಂಬರ್ 23 ರಂದು ಮರುಸ್ಥಾಪಿಸಲಾಗಿತ್ತು. ಆದರೆ ಇಂಟರ್‌ನೆಟ್‌ ಮರು ಆರಂಭವಾಗುತ್ತಿದ್ದಂತೆ ಮತ್ತೆ ಗಲಭೆ ಶುರುವಾಗಿದೆ. ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌, ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ತಡೆಯಲು ಸರ್ಕಾರ ಹಲವು ಕ್ರಮ ಕೈಗೊಳ್ಳುತ್ತದೆ ಹಾಗೂ ಭಾರತ ಮತ್ತು ಮ್ಯಾನ್ಮಾರ್‌ಗಳ ಗಡಿ ಪ್ರದೇಶದಲ್ಲಿ ಸಂಪೂರ್ಣ ಬೇಲಿ ಹಾಕುವ ಅಗತ್ಯವಿದೆ.

ಹೀಗಾಗ ಮಣಿಪುರದ 60ಕಿ.ಮೀ ಅಂತಾರಾಷ್ಟ್ರೀಯ ಗಡಿಗೆ ಬೇಲಿ ಹಾಕಲು ಕೇಂದ್ರ ಗೃಹ ಸಚಿವಾಲಯ ಮುಂದಾಗಿದೆ. ಇದಲ್ಲದೇ ಭಾರತ ಮತ್ತು ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಉಭಯ ಪ್ರದೇಶಗಳ ಜನರು ಯಾವುದೇ ದಾಖಲಾತಿ ಇಲ್ಲದೇ ಪರಸ್ಪರರ ಭೂಪ್ರದೇಶದ ಒಳಗೆ 16 ಕಿ.ಮೀ ವರೆಗೆ ಚಲಿಸುವ ಉಪಕ್ರಮವನ್ನು ರದ್ದು ಮಾಡುವಂತೆ ಕೇಂದ್ರಕ್ಕೆ ಕೋರಲಾಗಿದೆ ಎಂದಿದ್ದಾರೆ.

ಅಲ್ಲದೇ ಭದ್ರತಾ ಪಡೆಗಳ ನಿಯೋಜನೆಯಿಂದ ಸಂಘರ್ಷಗಳು ಬಹುತೇಕ ಕಡಿಮೆಯಾಗಿದ್ದು 2 ತಿಂಗಳಿನಿಂದ ರಾಜ್ಯದ ಪರಿಸ್ಥಿತಿ ಸುಧಾರಿಸಿದೆ ಎಂದು ಸಿಎಂ ತಿಳಿಸಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago