News Karnataka Kannada
Friday, May 17 2024
ಮಣಿಪುರ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವದ ಫೋಟೊ ವೈರಲ್

Photo of bodies of two missing students goes viral
Photo Credit : News Kannada

ಮಣಿಪುರ: ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ಶವಗಳಿನ್ನೂ ಪತ್ತೆಯಾಗಿಲ್ಲ. ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇಬ್ಬರು ವಿದ್ಯಾರ್ಥಿಗಳು ಪೊದೆಯ ಸಮೀಪ ಬಿದ್ದಿರುವುದನ್ನು ಚಿತ್ರದಲ್ಲಿ ಕಾಣಬಹುದು. ಆದರೆ ಆ ಜಾಗ ಯಾವುದು, ಹತ್ಯೆಯ ಹಿಂದಿನ ಕಾರಣಗಳೇನು, ಶವ ಎಲ್ಲಿದೆ ಎಂಬ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

ಈ ಬಗ್ಗೆ ಜನಾಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ “ತ್ವರಿತ ಮತ್ತು ನಿರ್ಣಾಯಕ” ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಕೇಂದ್ರ ತನಿಖಾ ದಳ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ಬರು ವಿದ್ಯಾರ್ಥಿಗಳ ಶವಗಳು ಇನ್ನೂ ಪತ್ತೆಯಾಗದಿರುವುದು ಸವಾಲಾಗಿ ಪರಿಣಮಿಸಿದೆ.

ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಾದ ಹಿಜಾಮ್ ಲಿಂಥೋಯಿಂಗಾಂಬಿ (17) ಮತ್ತು ಫಿಜಾಮ್ ಹೇಮ್ಜಿತ್ (20) ಸಶಸ್ತ್ರ ಗುಂಪೊಂದರ ಮುಂದೆ ಹುಲ್ಲುಗಾವಲಿನ ಕಾಂಪೌಂಡ್‌ನಲ್ಲಿ ಕುಳಿತಿರುವುದು ಫೋಟೋದಲ್ಲಿ ಕಂಡುಬರುತ್ತಿದೆ. ಅವರ ಹಿಂದೆ ಬಂದೂಕು ಹಿಡಿದ ಇಬ್ಬರು ವ್ಯಕ್ತಿಗಳು ಗೋಚರಿಸುತ್ತಾರೆ.ಇನ್ನೊಂದು ಫೋಟೋದಲ್ಲಿ ವಿದ್ಯಾರ್ಥಿಗಳ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಂಡುಬರುತ್ತಿದೆ. ಈ ಪ್ರಕರಣವು ರಾಜ್ಯದಲ್ಲಿ ಮತ್ತೊಂದು ಸುತ್ತಿನ ಭಾರಿ ಆಕ್ರೋಶವನ್ನು ಹುಟ್ಟು ಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು