Categories: ಮಣಿಪುರ

ಕುಕಿ ಉಗ್ರರಿಂದ ದಾಳಿ; ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ನ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ನರನ್ಸೇನಾ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ರಾತ್ರಿ 2:15ರ ಸುಮಾರಿಗೆ ಕುಕಿ ಉಗ್ರಗಾಮಿಗಳು ದಾಳಿ ನಡೆಸಿದ್ದಾರೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈಚೆಗೆ ಇನ್ನರ್‌ ಮಣಿಪುರ ಲೋಕಸಭಾ ಕ್ಷೇತ್ರದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದ ಘಟನೆಗಳು ವರದಿಯಾಗಿದ್ದವು. ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಮ್ನಾಪೊಕ್ವಿಯಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಮತಗಟ್ಟೆ ಬಳಿ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಮತದಾರರನ್ನು ಓಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಕರೆಸಲಾಯಿತು ಎಂದು ಅವರು ತಿಳಿಸಿದ್ದರು.

Ashitha S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

8 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

32 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

58 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago