News Karnataka Kannada
Monday, April 29 2024
ಮಣಿಪುರ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

New Delhi: Pakistan has instigated the Nuh violence
Photo Credit : IANS

ಮಣಿಪುರ: ಹಲವೆಡೆ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಖ್ಯಾತ ಗೀತನಾಹಿತಿ ಸೇರಿ ಎಂಟು ಜನ ಮೃತಪಟ್ಟಿದ್ದಾರೆ. ಜೊತೆಗೆ 18 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಮತ್ತೆ ಮಣಿಪುರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಆಗಸ್ಟ್‌ 29ರಿಂದಲೇ ವಿಷ್ಣುಪುರ ಹಾಗೂ ಚುರಚಂದ್‌ಪುರ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಹಾಗೂ ಮೈತೈ ಸಮುದಾಯದವರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಇದೇ ವೇಳೆ ಕುಕಿ ಸಮುದಾಯದ ಆರು ಬಂಡುಕೋರರು ಹತ್ಯೆಗೀಡಾಗಿದ್ದಾರೆ. ಇದರಲ್ಲಿ ಕುಕಿ ಖ್ಯಾತ ಗೀತನಾಹಿತಿ ಎಲ್‌.ಎಸ್‌.ಮಂಗ್‌ಬೋಯಿ ಲುಂಗ್ಡಿಮ್‌ (42) ಅವರು ಕೂಡ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ಕೈಮೀರಿ ಹೋಗುತ್ತಲೇ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಇನ್ನು ಹಿಂಸಾಚಾರವನ್ನು ನಿಗ್ರಹಿಸಲು ಭದ್ರತಾ ಸಿಬ್ಬಂದಿ ಕೂಡ ಕಾರ್ಯಾಚರಣೆ ಕೈಗೊಂಡಿದ್ದು, ಇದೇ ವೇಳೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸ್ಥಗಿತ, ನಿರ್ಬಂಧ ಸೇರಿ ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು