ನವದೆಹಲಿ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ( Meri Mati Mera Desh) ಅಭಿಯಾನಕ್ಕೆ ದೇಶಾದ್ಯಂತ ಚಾಲನೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಮನ್ ಕಿ ಬಾರ್ ರೇಡಿಯೋ ಪ್ರಸಾರದ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆ.15ರಂದು ದೇಶಾದ್ಯಂತ ವೀರ ಯೋಧರಿಗೆ ಗೌರವ ಸಮರ್ಪಿಸಲು ನನ್ನ ತಾಯಿ, ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಭಾರತೀಯರೆಲ್ಲರೂ ಈ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಗುವುದು. ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು. ಈ ಅಭಿಯಾನಕ್ಕಾಗಿ ನಿವೃತ್ತ ಯೋಧರು ಹಾಗೂ ಲಕ್ಷಾಂತರ ದೇಶಪ್ರೇಮಿಗಳನ್ನು ನಿಯೋಜನೆ ಮಾಡಲಾಗುತ್ತದೆ.ಜೊತೆಗೆ ಅಮೃತ ಕಲಶ ಯಾತ್ರೆಯನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದರು.