ದೇಶ

ಟ್ವಿಟ್ಟರ್ ಪ್ರತಿಸ್ಪರ್ಧಿ ‘ಥ್ರೆಡ್ಸ್’ ಭಾರತದಲ್ಲಿ ಬಿಡುಗಡೆ

ಮೆಟಾ ತನ್ನ ಟ್ವಿಟ್ಟರ್ ಪ್ರತಿಸ್ಪರ್ಧಿ ಥ್ರೆಡ್ಸ್ ಆ್ಯಪ್ ಅನ್ನು ಭಾರತ ಸೇರಿದಂತೆ ಜಾಗತಿಕವಾಗಿ ಬಿಡುಗಡೆ ಮಾಡಿದೆ. ಹೊಸ ಅಪ್ಲಿಕೇಶನ್ ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್ ಪ್ಲೇ ಸ್ಟೋರ್​ನಲ್ಲಿ ಮತ್ತು ಐಫೋನ್ ಬಳಕೆದಾರರಿಗೆ ಆ್ಯಪ್ ಸ್ಟೋರ್‌ನಲ್ಲಿ ಉಚಿತವಾಗಿ ಡೌನ್‌ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಬುಧವಾರ ಮಧ್ಯರಾತ್ರಿ ಯುಕೆಯಲ್ಲಿ ಥ್ರೆಡ್ಸ್ ಅಪ್ಲಿಕೇಶನ್ ಲೈವ್ ಮಾಡಲಾಯಿತು. ಇದೀಗ ಅಮೆರಿಕಾ, ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ಭಾರತ ಮತ್ತು ಜಪಾನ್ ಸೇರಿದಂತೆ 100 ಕ್ಕೂ ಹೆಚ್ಚು ದೇಶಗಳಲ್ಲಿ ಲಭ್ಯವಿದೆ. ಇದು ಕಟ್ಟುನಿಟ್ಟಾದ ಡೇಟಾ ಗೌಪ್ಯತೆ ನಿಯಮಗಳನ್ನು ಹೊಂದಿದೆ ಎಂದು ಕಂಪನಿ ಹೇಳಿದೆ. ದಿ ವರ್ಜ್ ವರದಿಯ ಪ್ರಕಾರ, ಕೇವಲ ಎರಡು ಗಂಟೆಗಳಲ್ಲಿ ಥ್ರೆಡ್ಸ್ ಅಪ್ಲಿಕೇಶನ್ 2 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರ ನೋಂದಣಿಗೆ ಸಾಕ್ಷಿಯಾಗಿದೆ.

ಬಳಕೆದಾರರು ತಮ್ಮ ಇನ್​ಸ್ಟಾಗ್ರಾಮ್ ಆಕೌಂಟ್​ ಮೂಲಕ ಥ್ರೆಡ್ಸ್‌ಗೆ ಲಿಂಕ್ ಮಾಡಬಹುದು. ಇನ್​ಸ್ಟಾದ ಯೂಸರ್‌ ನೇಮ್‌ ಥ್ರೆಡ್ಸ್​ನಲ್ಲೂ ಮುಂದುವರೆಸಬಹುದು. ವಿಶೇಷ ಎಂದರೆ, ಬಳಕೆದಾರರ ಇನ್​ಸ್ಟಾಗ್ರಾಮ್ ಅಕೌಂಟ್​ನಲ್ಲಿ ಬ್ಲೂ ಟಿಕ್ ಇದ್ದರೆ ಅದು ಥ್ರೆಡ್ಸ್​ನಲ್ಲಿ ಕಾಣಿಸಲಿದೆ.

Ashitha S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

10 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

39 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

55 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago