ನವದೆಹಲಿ: ಭಾರತೀಯ ವಾಯುಪಡೆಯ ವಿಮಾನವು ರಾಜಸ್ಥಾನದ ಜೈಸಲ್ಮೇರ್ನಲ್ಲಿ ಇಂದು ಅಪಘಾತಕ್ಕೀಡಾಗಿದೆ.
ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (LCA) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿದೆ. ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅಪಘಾತದ ಕಾರಣವನ್ನ ಕಂಡುಹಿಡಿಯಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ.