ಜೈಪುರ: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಗೆಳೆಯನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16 ವರ್ಷದ ಹುಡುಗಿಯನ್ನ ಜೈಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇತ್ತೀಚೆಗೆ ಆನ್ಲೈನ್ನಲ್ಲಿ ಪರಿಚಯವಾದ ಯುವಕ-ಯುವತಿಯರ ಪ್ರೇಮ ಪ್ರಕರಣಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ಕೇಸ್ ಬೆಳಕಿಗೆ ಬಂದಿದೆ. ಅಂಜು ಎಂಬ ಭಾರತೀಯ ಮಹಿಳೆ ಇತ್ತೀಚಿಗೆ ಪಾಕಿಸ್ತಾನಕ್ಕೆ ತೆರಳಿ ಸ್ನೇಹಿತ ನಸ್ರುಲ್ಲಾ ಎಂಬವನನ್ನ ಮದುವೆಯಾದ ಸುದ್ದಿಯಾದ ಬೆನ್ನಲ್ಲೇ ರಾಜಸ್ಥಾನದ ಸಿಕರ್ ಜಿಲ್ಲೆಯ ಶ್ರೀಮಾಧೋಪುರ್ ಪ್ರದೇಶದ ನಿವಾಸಿ 16ವರ್ಷದ ಹುಡುಗಿ ತನ್ನ ಪ್ರಿಯಕರನ ಭೇಟಿಗೆ ದೇಶಬಿಟ್ಟು ಹೋಗಲು ಯತ್ನಿಸಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
ಪಾಕಿಸ್ತಾನಕ್ಕೆ ಹೋಗಲು ಮುಂದಾದಾಗ ವಿಮಾನ ಟಿಕೆಟ್ ತೋರಿಸುವಂತೆ ಕೇಳಿದ್ದಾರೆ. ಅನುಮಾನಗೊಂಡ ಸಿಬ್ಬಂದಿ ವಿಚಾರಿಸಿದಾಗ ಹುಡುಗಿ ಸುಳ್ಳು ಹೇಳಿ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿದ್ದಾಳೆ ಎಂಬ ಸಂಶಯ ಮೂಡಿದೆ. ನಂತರ ಆಕೆಯನ್ನ ಬಂಧಿಸಿ ವಿಚಾರಣೆ ನಡೆಸಲು ವಲಸೆ ವಿಭಾಗದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸದ್ಯ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…