Categories: ಮಿಝೋರಾಂ

ಅಂದು ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಅಧಿಕಾರಿ ಇಂದು ಸಿಎಂ ರೇಸ್‌ ನಲ್ಲಿ

ಮಿಜೋರಾಂ: ಪಂಚ ರಾಜ್ಯಗಳ ಚುನಾವಣೆ ಪೈಕಿ ಇಂದು ಮಿಜೋರಾಂ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದೀಗ ಬಹುಮತ ಪಡೆದು ಅಧಿಕಾರಕ್ಕೆ ಸನಿಹದಲ್ಲಿರುವ ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್ ಪಿಎಂ) ಪಾರ್ಟಿ, ಮತ್ತು ಅದರ ನಾಯಕನ ಕುರಿತ ಮಾಹಿತಿ ಇಲ್ಲಿದೆ.

ಇದೀಗ ಮಿಜೋರಾಂನಲ್ಲಿ ಸಿಎಂ ಆಗಲು ಸಿದ್ದರಾಗಿರುವ 74 ವರ್ಷದ ಲಲ್ದುಹೊಮ ಐಪಿಎಸ್ ಅಧಿಕಾರಿಯಾಗಿದ್ದವರು. ಗೋವಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಂತರ ಅವರನ್ನು ರಾಷ್ಟ್ರ ರಾಜಧಾನಿಗೆ ವರ್ಗಾಯಿಸಲಾಯಿತು, ಅಲ್ಲಿ ಅವರು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಭದ್ರತೆಯ ಉಸ್ತುವಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಸೇವೆಯಿಂದ ಹೊರಬಂದ ನಂತರ, ಅವರು ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಪಕ್ಷವನ್ನು ಸ್ಥಾಪಿಸಿದರು ಅಲ್ಲದೆ 1984 ರಲ್ಲಿ ಲೋಕಸಭೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ನಿರ್ಮಿಸಿದರು. ಆದರೆ ಕೆಲವೇ ಸಮಯದಲ್ಲಿ ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹತೆ ಎದುರಿಸಿದರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ, ಅವರನ್ನು ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.

ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಅವರು 2020 ರಲ್ಲಿ ವಿಧಾನಸಭೆಯ ಸದಸ್ಯರಾಗಿ ಅನರ್ಹಗೊಂಡರು, ಆದರೆ ಅವರು 2021 ರಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದರು. ಇದೀಗ ಜೋರಾಂತಂಗಾ ಅವರ ಮಿಜೋ ನ್ಯಾಶನಲ್ ಫ್ರಂಟ್ ಸರ್ಕಾರವನ್ನು ಸೋಲಿಸಿ ಮಿಜೋರಾಂನಲ್ಲಿ ಲಲ್ದುಹೊಮ ಹೊಸ ಶಕೆ ಆರಂಭಿಸಿದ್ದಾರೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

42 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

1 hour ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago