Categories: ದೇಶ

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

ಬಿಹಾರ: ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ವಿರುದ್ಧ ಗುಡುಗಿದ್ದರು.

ಇದೀಗ ಅದೇ ಮನಮೋಹನ್ ಸಿಂಗ್​ ಅವರ ಮತ್ತೊಂದು ಹಳೆಯ ವಿಡಿಯೋವೊಂದು ವೈರಲ್​ ಆಗಿದ್ದು ಆ ಕುರಿತಾಗಿ ಮತ್ತೆ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮನಮೋಹನ್ ಸಿಂಗ್​ ಅವರು ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಯಾವತ್ತು ಹೇಳಿಲ್ಲವೆಂದು ಕಾಂಗ್ರೆಸ್​ ಆರೋಪಿಸಿತ್ತು. ಆದರೆ, ಇಂದು ಅವರ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದ್ದು, ಅದರಲ್ಲಿ ಅವರು ಅದನ್ನೇ ಹೇಳಿದ್ದಾರೆ. ಈ ಹಿಂದೆ ನನ್ನ ಹೇಳಿಕೆಯನ್ನು ಅಲ್ಲಗಳೆಯುತ್ತಿದ್ದ ಮಾಧ್ಯಮಗಳು ಈಗ ಮೌನವಹಿಸಿವೆ. ಯಾವುದೇ ಸೂಕ್ತ ಮಾಹಿತಿಯಿಲ್ಲದೆ ಅಥವಾ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಮಾಧ್ಯಮಗಳು ನನ್ನ ಮೇಲೆ ಹೇಗೆ ದಾಳಿ ಮಾಡುತ್ತಿವೆ ಎಂಬುದನ್ನು ನಾನು ನೋಡುತ್ತಿದ್ದೆ’ ಎಂದಿದ್ದಾರೆ.

‘ಕಾಂಗ್ರೆಸ್ ಮುಸ್ಲಿಂರಿಗೆ ಮಾತ್ರ ಆದ್ಯತೆ ನೀಡುತ್ತಿರುವ ಬಗ್ಗೆ ಮಾತನಾಡಿದಾಗ ಕೆಲವರು ತುಂಬಾ ಕೋಪಗೊಳ್ಳುತ್ತಾರೆ. ಕಳೆದ ವಾರದಿಂದ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದು ನಾನು ಅವರೆಲ್ಲರಿಗೂ ಒಂದು ಸವಾಲು ಹಾಕುತ್ತೇನೆ. ಮೊದಲು ನೀವು ಇದನ್ನು ಅರ್ಥಮಾಡಿಕೊಳ್ಳಿ, 25 ವರ್ಷಗಳು ಕಳೆದಿವೆ. ನೀವು ನನ್ನನ್ನು ಹೆದರಿಸಲು ಸಾಕಷ್ಟು ಪ್ರಯತ್ನಿಸಿದ್ದೀರಿ ಆದರೆ ಇಲ್ಲಿಯವರೆಗೆ ನೀವು ನನ್ನನ್ನು ಹೆದರಿಸಲು ಸಾಧ್ಯವಾಗಲಿಲ್ಲ. ಈಗ ಆ ಪ್ರಯತ್ನವನ್ನು ನಿಲ್ಲಿಸಿ’ ಎಂದು ಕಿಡಿಕಾರಿದ್ದಾರೆ.

 

Ashitha S

Recent Posts

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

12 mins ago

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…

17 mins ago

ಸುಡು ಬಿಸಿಲು: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ…

40 mins ago

ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ರೈಲ್ವೆ ಇಲಾಖೆ ನಿರ್ಧಾರ

ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ…

42 mins ago

ಚಾಮರಾಜನಗರ: ಜನ ಜಾನುವಾರುಗಳಿಗೆ ನೀರು, ಮೇವು ವಿತರಣೆ

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ  ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…

1 hour ago

ವರುಣನ ಅಬ್ಬರಕ್ಕೆ ತುಂಬಿ ಹರಿದ ಕೆರೆ ಕಟ್ಟೆಗಳು

ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…

1 hour ago