News Karnataka Kannada
Sunday, May 12 2024
ದೇಶ

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ

Pm Modi̤ ̤
Photo Credit : News Kannada

ನವದೆಹಲಿ: ಅಮೆರಿಕ ಮೂಲದ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ನಾಯಕರ ಪಟ್ಟಿಯಲ್ಲಿ ಶೇ 76 ರಷ್ಟು ರೇಟಿಂಗ್​ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಶೇ.76 ರಷ್ಟು ಜನರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ. ಶೇ.18 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ ಮತ್ತು ಶೇ.6ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಮಾರ್ನಿಂಗ್ ಕನ್ಸಲ್ಟ್ ವರದಿ ತಿಳಿಸಿದೆ.

ಪ್ರಧಾನಿ ಮೋದಿ ಬರೋಬ್ಬರಿ 76% ಅನುಮೋದನೆ ರೇಟಿಂಗ್‌ನೊಂದಿಗೆ ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ, ಈ ರೇಟಿಂಗ್ ವಿಶ್ವದಲ್ಲೇ ಅತಿ ಹೆಚ್ಚು ಎಂಬುದನ್ನು ಗಮನಿಸಬೇಕಾಗಿದೆ.

ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಈ ಪಟ್ಟಿಯಲ್ಲಿ ೨ನೇ ಸ್ಥಾನದಲ್ಲಿದ್ದರೆ, 40% ಅನುಮೋದನೆಯ ರೇಟಿಂಗ್‌ನೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಈ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದಾರೆ. ಮಾರ್ಚ್‌ನಿಂದ ಇದು ಅವರ ಅತ್ಯಧಿಕ ಶ್ರೇಯಾಂಕವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು