Categories: ದೇಶ

ಅವಿಶ್ವಾಸ ನಿರ್ಣಯ ಮಂಡನೆ: ಪ್ರಧಾನಿ ಮೋದಿ ಭವಿಷ್ಯ ನುಡಿದ ಐದು ವರ್ಷಗಳ ಹಿಂದಿನ ವಿಡಿಯೊ ವೈರಲ್

ದೆಹಲಿ: ಲೋಕಸಭೆಯಲ್ಲಿ ಇಂದು ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದ ಐದು ವರ್ಷಗಳ ಹಿಂದಿನ ವಿಡಿಯೊ ವೈರಲ್ ಆಗಿದೆ. 2023ರಲ್ಲಿ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧರಾಗುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಮೋದಿ ಹೀಗೆ ಹೇಳುವಾಗ ಲೋಕಸಭೆಯ ಸದಸ್ಯರು ಜೋರಾಗಿ ನಗುತ್ತಿದ್ದಾರೆ.

2018ರಲ್ಲಿ ಎನ್‌ಡಿಎ ಭರ್ಜರಿ ಬಹುಮತದೊಂದಿಗೆ ವಿಶ್ವಾಸಮತ ಗೆದ್ದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದರು. 2018 ರಲ್ಲಿ, ತೆಲುಗು ದೇಶಂ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಇದಕ್ಕೆ ವಿರೋಧ ಪಕ್ಷದಲ್ಲಿ ಹಲವು ಪಕ್ಷಗಳು ಬೆಂಬಲಿಸಿದ್ದವು. ಆಗ ಲೋಕಸಭಾ ಸ್ಪೀಕರ್ ಆಗಿದ್ದ ಸುಮಿತ್ರಾ ಮಹಾಜನ್ ಅವರು ವಿಶ್ವಾಸ ಮತಕ್ಕೆ ಅವಕಾಶ ನೀಡಿದ್ದು ಇದರಲ್ಲಿ ಎನ್ ಡಿಎ 314 ಮತಗಳನ್ನು ಪಡೆದಿತ್ತು. ಈ ಹೊತ್ತಲ್ಲಿ ಮೋದಿಯವರು, 2023 ರಲ್ಲಿ ನೀವು ಮತ್ತೆ ಅವಿಶ್ವಾಸ ನಿರ್ಣಯವನ್ನು ತರಲು ನಿಮಗೆ ಅವಕಾಶ ಸಿಗುವಂತೆ ನೀವು ಚೆನ್ನಾಗಿ ತಯಾರಿ ನಡೆಸಬೇಕು ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ಸದಸ್ಯರು ಅವರ ಭಾಷಣಕ್ಕೆ ಅಡ್ಡಿಪಡಿಸಿದಾಗ, ಪ್ರಧಾನಿ ಮೋದಿ, “ಯೇ ಸಮರ್ಪಣ್ ಭಾವ್ ಹೈ. ನೀವು ಹೆಮ್ಮೆ ಪಡುವ ಫಲಿತಾಂಶವು 400 ರಿಂದ 40 ಆಗುತ್ತಿದೆ ಎಂದು ಹೇಳಿದರು.

Ashitha S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago