News Karnataka Kannada
Monday, April 29 2024
ದೇಶ

ಯುವಕರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿರುವಂತೆ ಮೋದಿ ಸಲಹೆ

Modi Fou
Photo Credit :

ನವದೆಹಲಿ: “ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ” ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಕ್ರಮಗಳ ರೂಪುರೇಷೆಗಾಗಿ ದೆಹಲಿಯಲ್ಲಿ ಶುಕ್ರವಾರ ಆರಂಭವಾದ ಎರಡು ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯ ಮಹತ್ವದ ಸಭೆಯು ಶುಕ್ರವಾರ 5 ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು.

ನಮ್ಮ ಯೋಜನೆಗಳು ಬಡವರಿಗೆ, ಯುವಕರಿಗೆ, ರೈತರಿಗೆ, ಮಹಿಳೆಯರಿಗೆ ಸರಿಯಾಗಿ ತಲುಪಿದರೆ ಚುನಾವಣೆಯಲ್ಲಿ ನಮಗೆ ಹೆಚ್ಚು ಮತಗಳು ದೊರೆಯಲು ಸಹಕಾರಿಯಾಗುತ್ತದೆ. ಇದಕ್ಕಾಗಿ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ನಡೆಯುತ್ತಿರುವ ರಾಜ್ಯಗಳತ್ತ ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಕೇಂದ್ರ ಸರ್ಕಾರದ ಕಳಪೆ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಧ್ಯವಾದಷ್ಟು ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು. ಅಲ್ಲದೆ ನಾವು ಈಗ ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಬೇಕಾಗಿದೆ ಎಂದ ಮೋದಿ, ಚುನಾವಣೆ ತಯಾರಿಯನ್ನು ಇನ್ನಷ್ಟು ತ್ವರಿತಗೊಳಿಸುವಂತೆ ಸೂಚನೆ ನೀಡಿದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು