News Karnataka Kannada
Saturday, May 18 2024
ದೇಶ

ಇಂದು ಜಿ20 ಟೀಂ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ಭೋಜನ

Photo Credit : News Kannada
ನವದೆಹಲಿ: ಜಿ20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ 20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ್ ಮಂಟಪದಲ್ಲಿ ಸಂವಾದ ನಡೆಸಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸಂವಾದದ ನಂತರ ಭೋಜನ ಸವಿಯಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಜಿ20 ಶೃಂಗಸಭೆಯ ಯಶಸ್ಸಿಗೆ ಕೊಡುಗೆ ನೀಡಿದ ಸುಮಾರು 3,000 ಜನರು ಸಂವಾದದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಇದು ವಿಶೇಷವಾಗಿ ಶೃಂಗಸಭೆಯನ್ನು ಸುಗಮವಾಗಿ ನಡೆಸಲು ನೆಲಮಟ್ಟದಲ್ಲಿ ಕೆಲಸ ಮಾಡಿದವರನ್ನು ಒಳಗೊಂಡಿರುತ್ತದೆ.

ಇವರಲ್ಲಿ ಕ್ಲೀನರ್ಗಳು, ಚಾಲಕರು, ವೇಟರ್ಗಳು ಮತ್ತು ವಿವಿಧ ಸಚಿವಾಲಯಗಳ ಇತರ ಸಿಬ್ಬಂದಿಗಳು ಸೇರಿದ್ದಾರೆ. ಸಂವಾದದಲ್ಲಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು