Categories: ದೇಶ

ರಾಮ ಮಂದಿರವು ‘ಭರತವರ್ಷ ಪುನರ್ ನಿರ್ಮಾಣ’ದ ಆರಂಭ: ಮೋಹನ್ ಭಾಗವತ್

ನವದೆಹಲಿ: ಅಯೋಧ್ಯೆಯ ಜನ್ಮಸ್ಥಳದಲ್ಲಿ ರಾಮ್ ಲಲ್ಲಾನ ಪ್ರವೇಶ ಮತ್ತು ದೇವಾಲಯದ ಪ್ರಾಣ ಪ್ರತಿಷ್ಠಾ ಸಮಾರಂಭವು “ಭರತವರ್ಷದ ಪುನರ್ ನಿರ್ಮಾಣ’ದ ಅಭಿಯಾನದ ಆರಂಭವಾಗಿದೆ. ಇದು ಎಲ್ಲರ ಸಾಮರಸ್ಯ, ಏಕತೆ, ಪ್ರಗತಿ, ಶಾಂತಿ ಮತ್ತು ಯೋಗಕ್ಷೇಮವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ಅವರು ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಲೇಖನದಲ್ಲಿ ಅನೇಕ ಸಂಗತಿಗಳ ಕುರಿತು ಮೋಹನ್ ಭಾಗವತ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ “ಹಿಂದೂ ಸಮಾಜದ ನಿರಂತರ ಹೋರಾಟ” ವನ್ನು ಉಲ್ಲೇಖಿಸಿದ್ದಾರೆ ಮತ್ತು ವಿವಾದದ ಸಂಬಂಧದ ಉಂಟಾದ “ಘರ್ಷಣೆ ಮತ್ತು ಕಹಿ” ಇನ್ನು ಅಂತ್ಯಯಾಗಬೇಕು ಎಂದು ಅವರು ಹೇಳಿದ್ದಾರೆ.

ಹಲವು ವರ್ಷಗಳ ಕಾನೂನು ಹೋರಾಟದ ನಂತರ ಸುಪ್ರೀಂ ಕೋರ್ಟ್, 2019ರ ನವೆಂಬರ್ 9 ರಂದು “ಸತ್ಯ ಮತ್ತು ಸಂಗತಿಗಳನ್ನು” ಪರಿಶೀಲಿಸಿದ ನಂತರ ಮತ್ತು ಪ್ರಕರಣದ ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸಿ, ಸಮತೋಲಿತ ತೀರ್ಪನ್ನು ಪ್ರಕಟಿಸಿತು ಎಂದು ಮೋಹನ್ ಭಾಗವತ್ ಅವರು ಹೇಳಿದ್ದಾರೆ.

ಧರ್ಮದ ದೃಷ್ಟಿಯಿಂದ ನೋಡುವುದಾದರೆ ಭಾರತೀಯ ಬಹುತೇಕ ಸಮಾಜಗಳಲ್ಲಿ ರಾಮ ಆರಾಧಿಸುವ ದೈವವಾಗಿದ್ದಾರೆ. ಈಗಲೂ ಅವರನ್ನು ಇಡೀ ಸಮಾಜವು ಆದರ್ಶ ಎಂದು ಒಪ್ಪಿಕೊಳ್ಳುತ್ತದೆ. ಆದ್ದರಿಂದ ಈಗ ವಿವಾದದ ಪರ ಮತ್ತು ವಿರುದ್ಧವಾಗಿ ಉದ್ಭವಿಸಿರುವ ಸಂಘರ್ಷವನ್ನು ಕೊನೆಗೊಳಿಸಬೇಕು. ಈ ನಡುವೆ ಎದ್ದಿರುವ ಕಹಿಯೂ ಕೊನೆಯಾಗಬೇಕು.  ಅಯೋಧ್ಯೆ ಎಂದರೆ ಯುದ್ಧ ಇಲ್ಲದ ನಗರ; ಸಂಘರ್ಷ ಮುಕ್ತ ಸ್ಥಳ. ಈ ಸಂದರ್ಭದಲ್ಲಿ, ಇಡೀ ದೇಶದಲ್ಲಿ, ಅಯೋಧ್ಯೆಯ ಪುನರ್ನಿರ್ಮಾಣವು ಈ ಸಮಯದ ಅಗತ್ಯವಾಗಿದೆ ಮತ್ತು ನಮ್ಮೆಲ್ಲರ ಕರ್ತವ್ಯವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸಂದರ್ಭವು ರಾಷ್ಟ್ರೀಯ ಹೆಮ್ಮೆಯ ಪುನರುತ್ಥಾನವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

Ashitha S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

14 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

20 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

31 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

41 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

52 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

58 mins ago